RIPPONPETE ; ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು.
ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು ಅವರ ಪ್ರತಿಭೆಯನ್ನು ಹೊರಹಾಕಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ. ಎಲ್ಲಾ ಮಕ್ಕಳು ಸಮರ್ಥರು. ಎಲ್ಲರಲ್ಲೂ ಒಂದೊಂದು ವಿಧದ ಪ್ರತಿಭೆ ಅಡಗಿದ್ದು ಅವುಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ನಮ್ಮ ಶಿಕ್ಷಕರು ಪೋಷಕರು ಮಾಡಬೇಕು ಎಂದರು.
ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆಯ ಕಾರ್ಯದರ್ಶಿ ರೆ.ಪಾ.ಬಿನೋಯಿ ಮ್ಯಾಥ್ಯೂ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ವಾರ್ಷಿಕೋತ್ಸವ ಸಮಾರೋಪ ಸಮಾರಂಭವನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಗುಡ್‌ಶಫರ್ಡ್ ಶಾಲಾ ಪೋಷಕ ಸಮಿತಿ ಅಧ್ಯಕ್ಷ ಬಿ.ಹಸನಬ್ಬ, ಸಬಾಸ್ಟಿನ್ ಮ್ಯಾಥ್ಯೂಸ್, ಸಿ.ಆರ್.ಪಿ. ಎನ್.ಮಂಜುನಾಥ, ಮುಖ್ಯ ಶಿಕ್ಷಕಿ ಸಿಸ್ಟರ್ ಜೋಸ್ಫಿನ್ ಇನ್ನಿತರರು ಇದ್ದರು.
ರೋಜಾ ಸ್ವಾಗತಿಸಿದರು. ಷಣ್ಮುಖ ನಿರೂಪಿಸಿದರು. ಶಿಕ್ಷಕ ಮಂಜುನಾಥ ಆಚಾರ್ ವಂದಿಸಿದರು.