ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯ್ಸ್’ರಿಗೆ ನವೋದಯ ರತ್ನ ಪ್ರಶಸ್ತಿ

Written by malnadtimes.com

Published on:

RIPPONPETE ; ಗಾಜನೂರಿನ ಪಿ ಎಂ ಶ್ರೀ ನವೋದಯ ವಿದ್ಯಾಲಯದಲ್ಲಿ “ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ” ಹಮ್ಮಿಕೊಂಡು. ಹಳೆ ವಿದ್ಯಾರ್ಥಿಗಳ 14ನೇ ಬ್ಯಾಚ್ ವತಿಯಿಂದ ಬೆಳ್ಳಿಹಬ್ಬ ಸಂಭ್ರಮ ನಡೆಯಿತು. ಈ ವಿಶೇಷ ಸಂದರ್ಭದಲ್ಲಿ ಗಾಜನೂರು ನವೋದಯದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ. ವಿದ್ಯಾರ್ಥಿಗಳನ್ನು ಉನ್ನತ ಮಟ್ಟಕ್ಕೆ ಬೆಳೆಯುವುದಕ್ಕೆ ಪ್ರೆರೇಪಿಸಿದ ಹಳೆ ಶಿಕ್ಷಕರ ವೃಂದಕ್ಕೆ, ಅವರ ಕಾರ್ಯವನ್ನು ಶ್ಲಾಘಿಸಿ, ನೆನಪಿನ ಕಾಣಿಕೆ ನೀಡಿ, ಸನ್ಮಾನಿಸಲಾಯಿತು. ಜೊತೆಗೆ ಈ ಕಾರ್ಯಕ್ರಮದಲ್ಲಿ ನವೋದಯ ಶಾಲೆಯಲ್ಲಿ ಓದಿ, ಉತ್ತಮ ಸಾಧನೆ ಮಾಡಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಸಾಧಕರನ್ನು ಮತ್ತು ಸಮಾಜ ಸೇವಕರನ್ನು ಗುರುತಿಸಿ ‘ನವೋದಯ ಭೂಷಣ’ ಹಾಗೂ ‘ನವೋದಯ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ಈ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ, ವಿಶೇಷ ಅತಿಥಿಗಳಾಗಿ ಹೆಚ್ ಎನ್ ಎಸ್ ರಾವ್, ಎ ಎನ್ ರಾಮಚಂದ್ರ, ಎಸ್ ವಿ ಶೇಷಾದ್ರಿ ಮತ್ತು ಪಿ ರವಿ, ಜವಾಹಾರ್ ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲಮ ಜಾನ್ಸನ್ ಪಿ ಜೇಮ್ಸ್ ಅವರುಗಳು ಉಪಸ್ಥಿತರಿದ್ದರು.

ಸಮಾರಂಭದ ಮುಖ್ಯ ಅತಿಥಿಗಳಾದ, ಡಾ.ಧನಂಜಯ ಸರ್ಜಿ ಮಾತನಾಡಿ, ನವೋದಯ ಶಾಲೆಗಳು, ಗ್ರಾಮೀಣ ಭಾಗದ  ವಿದ್ಯಾರ್ಥಿಗಳನ್ನು ಆರಿಸಿ, ಅವರಲ್ಲಿ ಅಡಗಿದ್ದ ಸುಪ್ತ ಪ್ರತಿಭೆ ಗಳನ್ನು ಗುರುತಿಸಿ, ಒಳ್ಳೆಯ ಸಂಸ್ಕೃತಿ ಕಲಿಸಿ, ದೇಶಕ್ಕೆ ಉತ್ತಮ ನಾಗರಿಕರನ್ನಾಗಿಸುವ ಒಂದು ಅತ್ಯುತ್ತಮ ಸಂಸ್ಥೆಯಾಗಿ ಬೆಳೆದಿದೆ. ಶಿಕ್ಷಣದ ಮಹತ್ವ ಮತ್ತು ಸರಿಯಾದ ಮೌಲ್ಯಗಳ ಪ್ರಾಮುಖ್ಯತೆಯನ್ನು ವಿವರಿಸಿದರು. ಅವರ ಮಾತುಗಳು ಶಿಕ್ಷಣವು ವ್ಯಕ್ತಿತ್ವವನ್ನು ರೂಪಿಸಲು ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ನವೋದಯ ರತ್ನ ಪ್ರಶಸ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚದ ಪ್ರಕಾಶ್ ಜೋಯ್ಸ್ – (ಸಂಸ್ಥಾಪಕ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ) ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಿದ ಕೊಡುಗೆ ಗುರುತಿಸಿ ಸನ್ಮಾಸಿಸಲಾಯಿತು.

ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯ್ಸ್ ಮಾತನಾಡಿ, ಉಚಿತ ನವೋದಯ ತರಬೇತಿ ಶಿಬಿರದ ಕಲ್ಪನೆ. ಗ್ರಾಮೀಣ ಭಾಗದ ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂದು. ಎಲ್ಲಾ ಹಳೆ ನವೋದಯದ ವಿದ್ಯಾರ್ಥಿಗಳು, ತಮ್ಮ ಊರಿನ ಶಾಲೆಗೆ ಭೇಟಿ ನೀಡಿ ನವೋದಯ ಶಾಲೆಗಳ ಮಹತ್ವ ವಿವರಿಸಿ, ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಯಲು ಪ್ರಯತ್ನ ಪಡಬೇಕು ಎಂದು ಆಶಿಸಿದರು.

ಈ ಸಂಸ್ಥೆಯಿಂದ ಕಳೆದ ಮೂರು ವರ್ಷಗಳಿಂದ 309 ಮಕ್ಕಳು ಉಚಿತ ತರಬೇತಿ ಪಡೆದು, ಒಟ್ಟು 6 ಮಕ್ಕಳು ನವೋದಯ ಶಾಲೆಗೆ ಮತ್ತು 56 ಮಕ್ಕಳು ಮೊರಾರ್ಜಿ ವಸತಿ ಶಾಲೆಗಳಿಗೆ ತೇರ್ಗಡೆ ಆಗಿರುತ್ತಾರೆ. ಈ ಸಂಸ್ಥೆಯಿಂದ ಗ್ರಾಮೀಣ ಭಾಗದ ಮಕ್ಕಳು 1.82 ಕೋಟಿ ರೂಪಾಯಿ ಮೌಲ್ಯದ, ಶೈಕ್ಷಣಿಕ ಉಪಯೋಗ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಪಡೆದುಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ ಈ ಸಂಸ್ಥೆ ಹುಂಚ, ಕೋಣಂದೂರು ಮತ್ತು ಶಿಕಾರಿಪುರದ ನೆಲವಾಗಿಲು ಗ್ರಾಮಗಳಲ್ಲೂ ಕಾರ್ಯ ನಡೆಸುತ್ತಿದೆ.

Leave a Comment