ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ !
ತೀರ್ಥಹಳ್ಳಿ : ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ದೇವಂಗಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದೇವಂಗಿಯ ಇಂದಿರಾನಗರ ನಿವಾಸಿ ಶಶಿಕಲಾ (43) ಎಂದು ಗುರುತಿಸಲಾಗಿದೆ. ಈಕೆ ಕಳೆದ ರಾತ್ರಿಯಿಂದ ನಾಪತ್ತೆಯಾಗಿದ್ದು ಶಶಿಕಲಾಗಾಗಿ ಪತಿ ಸುಬ್ರಹ್ಮಣ್ಯ ರಾತ್ರಿಯಿಡಿ ಹುಡುಕಾಟ ನಡೆಸಿದ್ದರು. ಇಂದು ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದೆ.
ಶವ ಗಮನಿಸಿದ ಕುಟುಂಬಸ್ಥರು ಕೊಲೆ ಆರೋಪವನ್ನು ಮಾಡುತ್ತಿದ್ದಾರೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರಿಂದ ಆಗಮಿಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.