RIPPONPETE ; ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು.
ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಹಾಗೂ ಅರಸಾಳು ಗ್ರಾಮದ ಫಾತಿಮಾ ಚರ್ಚ್‌ನಲ್ಲಿ ನಿರ್ಮಾಣ ಮಾಡಲಾದ ಕ್ರಿಸ್ಮಸ್ ಟ್ರೀ, ವಿವಿಧ ರೀತಿಯ ನಕ್ಷತ್ರಗಳು, ಯೇಸುವಿನ ಜನನ ಸಂದರ್ಭ ನೆನಪಿಸುವ ಗೋದಲಿ ದಾರಿ ಹೋಕರ ಗಮನ ಸೆಳೆದವು.
ಮಂಗಳವಾರ ಮಧ್ಯರಾತ್ರಿ ಹಾಗೂ ಬುಧವಾರ ಮುಂಜಾನೆ ಕ್ರೈಸ್ತ ಧರ್ಮದ ಪದ್ಧತಿಯಂತೆ ದೀಪಾಲಂಕಾರದೊಂದಿಗೆ ಯೇಸುವಿಗೆ ಕ್ರೈಸ್ತ ಧರ್ಮೀಯರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕ್ರಿಸ್ತನ ಜನನದ ಶುಭ ಗಳಿಗೆಯ ಸ್ಮರಣೆಯ ಸಂಕೇತವಾಗಿ ಶಾಂತಿ, ದೀನತೆಗಾಗಿ ಪ್ರಾರ್ಥನೆ ಸಲ್ಲಿಸಿ ಟದ ಭಕ್ತರು ಮೇಣದ ಬತ್ತಿಗಳನ್ನು ಬೆಳಗಿಸಿದರು.
ಧರ್ಮಸಭೆಯಲ್ಲಿ ಮಾತನಾಡಿದ ಫಾದರ್,
ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು.
ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ. ಯುವಜನರು ಆಧುನಿಕ ಜೀವನದ ಭರಾಟೆಯಲ್ಲಿ ದಾರಿ ತಪ್ಪದೆ ಉತ್ತಮ ಜೀವನ ನಡೆಸುವಂತಾಗಲಿ ಎಂದು ಕರೆ ನೀಡಿದರು. ಪುಟ್ಟ ಮಕ್ಕಳು, ಯುವಕ, ಯುವತಿಯರು ಮಹಿಳೆಯರು, ಸಂತ ಕ್ಲಾಸ್ ವೇಶ ಧರಿಸಿ ನೃತ್ಯದ ಮೂಲಕ ಗಮನಸೆಳೆದರು.
ಚರ್ಚ್‌ಗಳಲ್ಲಿ ಕೇಕ್, ಚಾಕೊಲೇಟ್, ಸಿಹಿ ತಿಂಡಿಗಳನ್ನು ವಿತರಿಸಿ ಸಂಭ್ರಮಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.