ಕೋಡೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಉಮೇಶ್ ರಾಜೀನಾಮೆ ; ತೆರವಾದ ಸ್ಥಾನಕ್ಕೆ ಜ.10ಕ್ಕೆ ಚುನಾವಣೆ

Written by malnadtimes.com

Updated on:

HOSANAGARA ; ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಉಮೇಶ್ ಕೆ.ಎಸ್. ರಾಜೀನಾಮೆ ನೀಡಿದ್ದು ತೆರವಾದ ಸ್ಥಾನಕ್ಕೆ ಜ.10 ರಂದು ಚುನಾವಣೆ ನಡೆಯಲಿದೆ.

WhatsApp Group Join Now
Telegram Group Join Now
Instagram Group Join Now

ವೈಯಕ್ತಿಕ ಕಾರಣದಿಂದಾಗಿ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಮೇಶ್ ತಿಳಿಸಿದ್ದಾರೆ.

ಮೊದಲ ಬಾರಿಗೆ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ನಂತರ 2ನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಉಮೇಶ್
ಹಿಂದುಳಿದ ವರ್ಗದ ಮುಖಂಡರಾಗಿ ಹಾಗು ಹಲವಾರು ಸಂಘ ಸಂಸ್ಥೆಗಳ ಅನೇಕ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸರ್ಕಾರದ ಯೋಜನೆಗಳನ್ನು ಪಾರದರ್ಶಕವಾಗಿ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಯಶ್ವಸಿಯಾಗಿದ್ದರು.

ಕೋಡೂರು ಗ್ರಾ.ಪಂ. 13 ಸದಸ್ಯ ಬಲ ಹೊಂದಿದ್ದು 09 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 04 ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಹೊಂದಿದೆ.

Leave a Comment