SAGARA ; ತಾಲೂಕಿನ ಆನಂದಪುರ ಮುರುಘಾಮಠದ ಸಮೀಪ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಎರ್ಟಿಗಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರದವರೆಂದು ತಿಳಿದುಬಂದಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.