HOSANAGARA ; ತಾಲೂಕಿನ ಹುಲಿಕಲ್ ಘಾಟ್ ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.
ದಾವಣಗೆರೆಯಿಂದ ಮಂಗಳೂರು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ ಭಾನುವಾರ ರಾತ್ರಿ 1.45 ಗಂಟೆಗೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಪ್ರಪಾತಕ್ಕೆ ಉರುಳಿದೆ.
ಬಸ್ಸಿನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡೆಗೋಡೆ ನಿರ್ಮಿಸಿ ;
‘ರಸ್ತೆಯ ಎರಡೂ ಬದಿ ಯಾವುದೇ ತಡೆಗೋಡೆ ಇಲ್ಲ. ರಸ್ತೆ ಬದಿ ಮಣ್ಣು ಹಾಕಿ ಎತ್ತರಿಸಲಾಗಿದ್ದು, ಬದಿಗೆ ಅಳವಡಿಸಿರುವ ಕಬ್ಬಿಣದ ಪಟ್ಟಿಗಳು ಮುಚ್ಚಿಹೋಗಿವೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ತಡೆಗೋಡೆ ನಿರ್ಮಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಚಾಲಕ ಬಸವರಾಜ ಒತ್ತಾಯಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.