HOSANAGARA ; ಪಟ್ಟಣದ ಶ್ರೀ ವಿದ್ಯಾ ಸನ್ನಿಧಾನo ಮಾಂಟೆಸರಿ ಸ್ಕೂಲ್ನ ವಾರ್ಷಿಕೋತ್ಸವದ ವರ್ಣರಂಜಿತ ಸಮಾರಂಭ ಕಲಾವೈಭವ ಪಟ್ಟಣದ ಗಾಯತ್ರಿ ಮಂದಿರದಲ್ಲಿ ಶ್ರೀ ಚಂಡಿಕಾ ಅವನ ಕಲಾ ಮತ್ತು ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಪಿ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.
ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ವ್ಯವಹಾರ ನ್ಯಾಯಾಧೀಶ ಫಾರೂಕ್ ಝಾರೆ ರವರು ಸಮಾರಂಭವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಶಿಕ್ಷಣದ ಜೊತೆಗೆ ಸಂಸ್ಕಾರವು ಅಗತ್ಯವಿದ್ದು ಈ ಸಂಸ್ಕಾರ ಈ ವಿದ್ಯಾಸಂಸ್ಥೆಯಿಂದ ದೊರಕುತ್ತಿದ್ದು ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿ ಎಂದು ಹಾರೈಸಿದರು.
ದಾವಣಗೆರೆಯ ದೃಶ್ಯ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಜಯರಾಜ್ ಎಂ ಚಿಕ್ಕಪಾಟೀಲ್, ಪ್ರಾಧ್ಯಾಪಕ ಹರೀಶ್, ಕಾರಣಗಿರಿಯ ಶ್ರೀ ಗ್ರಾಮಭಾರತಿ ಸೇವಾ ಟ್ರಸ್ಟ್ನ ಅಧ್ಯಕ್ಷ ಹನಿಯ ರವಿ, ವಿದ್ಯಾ ಸನ್ನಿಧಾನಂ ಮಾಂಟೆಸರಿ ಸ್ಕೂಲ್ನ ಮುಖ್ಯೋಪಾಧ್ಯಾಯನಿ ಆಶಾ ಶ್ರೀನಿವಾಸ್, ಮುಖ್ಯ ಅತಿಥಿಗಳಾಗಿ ಮಾತನಾಡಿ, ಶಾಲೆಯ ಪುಟಾಣಿಗಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಿದರು.
ರಂಜನಿ ಸ್ವಾಗತಿಸಿದರು. ನಿಖಿಲ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಕೆ.ವಿ ನಾಗರತ್ನ ಅಭಾರ ಮನ್ನಿಸಿದರು.
ಶಾಲೆಯ ಪುಟಾಣಿ ಮಕ್ಕಳಿಂದ ಆಕರ್ಷಕ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.