SHIVAMOGGA ; ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ.
ಗಿರೀಶ್ ನಾಯ್ಕ (30) ಕೊಲೆಯಾದ ದುರ್ದೈವಿ. ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾರೆ. ವೈಯಕ್ತಿಕ ದ್ವೇಷದಿಂದ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದು ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.