RIPPONPETE ; ಶ್ರೀಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಜ.15 ರಂದು ಲೋಕೋದ್ದಾರಕ್ಕಾಗಿ ಶಿವನಾಮಸ್ಮರಣೆ ಮತ್ತು ಮಕರ ಸಂಕ್ರಾಂತಿ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಠವು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ವಹಿಸಿ ಆಶೀರ್ವಚನ ನೀಡುವರು.
ಮಕರ ಸಂಕ್ರಾಂತಿಯ ಅಂಗವಾಗಿ ಮಠದಲ್ಲಿ ಲೋಕೋದ್ದಾರಕ್ಕಾಗಿ ಲಿಖಿತಾ ಶಿವಮಂತ್ರಾಭಿಯಾನ ನಡೆಸಲಾಗಿದ್ದು ಜನವರಿ 15 ರಂದು ಬೆಳಗ್ಗೆಯಿಂದ ಭಕ್ತರಿಂದ ಶಿವನಾಮ ಸ್ಮರಣೆ ಪಠಣ ನಂತರ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಈ ಸಮಾರಂಭದಲ್ಲಿ ನಾಡಿನ ವಿವಿಧ ಮಠಾಧೀಶರು ರಾಜಕೀಯ ಮುಖಂಡರು ಸಮಾಜ ಬಾಂಧವರ ಭಾಗವಹಿಸಲಿದ್ದಾರೆ.
ಸಕಲ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಶ್ರೀಗಳು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.