RIPPONPETE ; ಪಟ್ಟಣದ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷೆ ಸುಮಂಗಳ ಹರೀಶ್ ಹಾಗೂ ಕಾರ್ಯದರ್ಶಿ ರೂಪ ಶಂಕರಪ್ಪ ತಿಳಿಸಿದ್ದಾರೆ.
ಸೋಮವಾರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 14 ಮಂಗಳವಾರ ಸಂಜೆ 4 ಗಂಟೆಗೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ರಿಪ್ಪನ್‌ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ, ಈ ಭಜನಾ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳಾ ತಂಡಗಳು ಭಾಗವಹಿಸಲಿದೆ.
ಈ ಸಂಕ್ರಾಂತಿ ಉತ್ಸವ ಹಾಗೂ ಭಜನಾ ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರು ಸೇರಿದಂತೆ ಎಲ್ಲಾ ಸಾರ್ವಜನಿಕ ಬಂಧುಗಳು ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆಯ ಪದಾಧಿಕಾರಿಗಳಾದ ಪ್ರಮೀಳಾ ಲಕ್ಷ್ಮಣಗೌಡ. ಕೋಮಲ ಕೇಶವ್, ಜಯಂತಿ ಅಶೋಕ್, ಶ್ಯಾಮಲ ಪ್ರದೀಪ್, ವಾಣಿ ಗೋವಿಂದಪ್ಪ ಗೌಡ, ಪ್ರವೀಣೆ ಮಂಜುನಾಥ್, ವೀಣಾ ಗುರುಮೂರ್ತಿ, ಮಮತಾ ವಿಷ್ಣುಮೂರ್ತಿ ಇನ್ನಿತರರಿದ್ದರು.
ಚಂದವಳ್ಳಿ ಸರ್ಕಾರಿ ಶಾಲೆಯ ಧ್ವಜಸ್ತಂಭ ಉದ್ಘಾಟನೆ
RIPPONPETE ; ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ನಿರ್ಮಿಸಲಾಗಿರುವ ಧ್ವಜಸ್ತಂಭವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.
ಎಸ್.ಡಿ.ಎಂ.ಸಿ.ಆಧ್ಯಕ್ಷ ಗಣಪತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಆತಿಥಿಗಳಾಗಿ ತಹಶೀಲ್ದಾರ್ ರಶ್ಮಿ ಹಾಲೇಶಪ್ಪ, ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ, ಸರ್ಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಬಂಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್.ಸುರೇಶ್, ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ದಾನೇಶಪ್ಪ, ದಿವಾಕರ್, ಕೃಷ್ಣೋಜಿರಾವ್, ನಾಗೇಶ, ಪುಟ್ಟಸ್ವಾಮಿ, ಗಣೇಶ್ ಇನ್ನಿತರರು ಭಾಗವಹಿಸಿದ್ದರು.
ಹೆಚ್.ಪಿ.ರಂಜಿತಾ ಸ್ವಾಗತಿಸಿದರು. ಮುಖ್ಯಶಿಕ್ಷಕ ಜಗದೀಶ ಕಾಗಿನಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುವಾಣಿ ವಾರ್ಷಿಕ ವರದಿ ವಾಚನ ಮಾಡಿದರು. ಸಹಶಿಕ್ಷಕಿ ಬಿ.ತಾಜನ್ ನಿರೂಪಿಸಿದರು.