ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕೃತಿ (21) ಮೃತಪಟ್ಟ ವಿದ್ಯಾರ್ಥಿನಿ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದಿಂದ ಕುಟುಂಬದವರೊಂದಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಅಮೃತಾಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.


ಕಾಗದನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
