ಸಾಗರ ; ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ.
ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ.
ಮೃತನಿಗೆ ತಂದೆ, ತಾಯಿ ಮತ್ತು ಸಹೋದರ ಇದ್ದಾರೆ. ಈ ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.