ಎನ್.ಆರ್.ಪುರ ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಶನಿವಾರ ನಡೆದಿದೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ಮೂಲದ ವಿನೋದಾ ಬಾಯಿ (39) ಮೃತ ಕಾರ್ಮಿಕ ಮಹಿಳೆ ಎಂದು ತಿಳಿದು ಬಂದಿದೆ.

ಕೂಲಿಗಾಗಿ ವಿಜಯನಗರ ಜಿಲ್ಲೆಯಿಂದ ವಲಸೆ ಬಂದಿದ್ದ ಕುಟುಂಬದ ಈ ಮಹಿಳೆ ಶನಿವಾರ ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.