ತೀರ್ಥಹಳ್ಳಿ ; ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರಲ್ಲಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಇಬ್ಬರನ್ನು ತೀರ್ಥಹಳ್ಳಿಯ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗಿತ್ತು. ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಈ ಕಾರಣದಿಂದ ತೀರ್ಥಹಳ್ಳಿ ಕೋರ್ಟ್ಗೆ ಸೋಮವಾರ ಹಾಜರುಪಡಿಸಲಾಗಿತ್ತು.

ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಗೀತಾಮಣಿಯವರು ವಿಚಾರಣೆ ನಡೆಸಿ ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಪೊಲೀಸರಿಗೆ ಸಹಕರಿಸುವಂತೆ ಆದೇಶ ನೀಡಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.