ಮೂಡಿಗೆರೆ ; ಸರ್ವೇ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಗುರುವಾರ ವರದಿಯಾಗಿದೆ.
ಶಿವಕುಮಾರ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸರ್ವೇ ಅಧಿಕಾರಿಯಾಗಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾದ ಶಿವಕುಮಾರ್ ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೆ ಚಿಕ್ಕಮಗಳೂರು ನೇಕಾರರ ಸಂಘದ ನಿರ್ದೇಶಕರಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಬಳಸುತ್ತಿದ್ದ ಸಿಮ್ ಅನ್ನು ಮೊನ್ನೆಯಷ್ಟೇ ಚೇಂಜ್ ಮಾಡಿದ್ದರು. ಹೀಗಾಗಿ ಸರ್ವೇ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಮೂಡಿಗೆರೆ ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಾಡಿಗೆ ಮನೆಯಲ್ಲಿ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆ ಬಳಿ ಯಾರನ್ನೂ ಬಿಡದೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.