ಹೊಸನಗರ ; ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ನೇತೃತ್ವದಲ್ಲಿ ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರ ಹುಟ್ಟು ಹಬ್ಬದ ಪ್ರಯುಕ್ತ ಕೋಡೂರು ಶಂಕರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡುವುದರ ಮೂಲಕ ತಾಲ್ಲೂಕಿನಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಂತರ ಹೊಸನಗರ ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಲಗೋಡು ಉಮೇಶ್, ಸುಧಾಕರ್ ಗೌಡ, ವೇದಾಂತಪ್ಪ ಗೌಡ, ರಂಜಿತ್‌ಕುಮಾರ್, ವಿಕಾಸ್, ನಾಗರಾಜ ಸ್ವಾಮಿ, ಸುಬ್ಬಣ್ಣ, ವೆಂಕಟೇಶ, ಸುಮುಖ, ಗಿರೀಶ, ಶಶಿಧರ್, ಪ್ರದೀಪ್, ಲಕ್ಷ್ಮಣ, ರಾಮಣ್ಣ, ರಾಘುಪೂಜಾರಿ, ಗುರುಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಇನ್ನೂ ಬೇಳೂರು ಹುಟ್ಟು ಹಬ್ಬದ ಪ್ರಯುಕ್ತ ಚಿಕ್ಕಜೇನಿ ಗ್ರಾಪಂ ಅಧ್ಯಕ್ಷ ರಾಜು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಶಾಸಕರಿಗೆ ಶುಭಕೋರಿದರು.
