ಎನ್.ಆರ್.ಪುರ ; ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ದೇವಾಲೆಕುಣುಜದ ಸೇತುವೆ ಸಮೀಪದಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕೊನೋಡಿ ಗ್ರಾಮದ ಹೆಮ್ಮೂರಿನ ಆದರ್ಶ (32) ಎಂಬ ಯುವಕ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಘಟನೆ ನಡೆದಿದೆ.
ಶುಕ್ರವಾರ ಸಂಜೆ ಕುದುರೆಗುಂಡಿಯಿಂದ ಹೆಮ್ಮೂರಿಗೆ ಸ್ಕೂಟಿಯಲ್ಲಿ ಬರುತ್ತಿದ್ದಾಗ ದೇವಾಲೆಕುಣುಜದ ಸೇತುವೆ ಸಮೀಪದ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆದರ್ಶ ಸ್ಕೂಟಿಯೊಂದಿಗೆ ಪಕ್ಕದ ತೋಟಕ್ಕೆ ಹೋಗಿ ಬಿದ್ದಿದ್ದಾನೆ. ಸ್ಥಳೀಯರು ಗಮನಿಸಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.
ಗಂಭೀರ ಗಾಯಗೊಂಡ ಯುವಕನನ್ನು ಕೊಪ್ಪ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಯುವಕ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.