ಭದ್ರಾವತಿ ; ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಭದ್ರಾವತಿಯ ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೀನಾಕ್ಷಿ (52) ಮೃತ ಮಹಿಳೆ. ಅವರು ಪತಿ ಗುತ್ತಿಗೆದಾರ ಸುಬ್ರಮಣಿ ಮತ್ತು ಮೂವರು ಪುತ್ರರು ಸೇರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೀನಾಕ್ಷಿ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದ್ದರಿಂದ ಮಂಗಳವಾರ ಬೆಳಗ್ಗೆ ಮೃತ ದೇಹವನ್ನು ಮನೆಗೆ ತಂದು ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಬಂಧು-ಬಾಂಧವರು ಅಂತಿಮ ದರ್ಶನಕ್ಕೆ ಆಗಮಿಸಿದ್ದರು ಈ ವೇಳೆ ಕಣ್ಣು ಬಿಟ್ಟು ನೋಡಿ ಉಸಿರಾಡಿದ ಮೀನಾಕ್ಷಿ ಅವರನ್ನು ಕೂಡಲೇ ಕುಟುಂಬದವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೀನಾಕ್ಷಿ ಮೃತಪಟ್ಟಿದ್ದಾರೆ. ಶುಕ್ರವಾರ ಭದ್ರಾವತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.