ತೀರ್ಥಹಳ್ಳಿ ; ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಶಿರಸಿಗೆ ಹೊರಟಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದ ಶ್ರೀಗಳವರ ಕಾರು ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಕೋಟೆಗದ್ದೆಯಲ್ಲಿ ಸರಣಿ ಅಪಘಾತವಾಗಿದೆ.
ಶ್ರೀಗಳ ವಾಹನ ಸಾಗುತ್ತಿರುವ ಸಂದರ್ಭದಲ್ಲಿ ದನವೊಂದು ರಸ್ತೆಗೆ ಅಡ್ಡ ಬಂದಾಗ ಅದನ್ನು ತಪ್ಪಿಸಲು ಹೋದಾಗ ಈ ಅವಘಡ ಸಂಭವಿಸಿದೆ. ಮುಂಭಾಗದಲ್ಲಿದ್ದ ಎಸ್ಕಾರ್ಟ್ ಹಾಗೂ ಮಧ್ಯ ಸಾಗುತ್ತಿದ್ದ ಶ್ರೀಗಳ ವಾಹನ ಹಾಗೂ ಹಿಂಭಾಗದಲ್ಲಿದ್ದ ಭಕ್ತರ ವಾಹನ ಸೇರಿದಂತೆ ಮೂರು ವಾಹನಗಳ ನಡುವೆ ಏಕಾಏಕಿ ಅಪಘಾತ ಸಂಭವಿಸಿದ್ದು ಮೂರು ವಾಹನಗಳು ಜಖಂ ಆಗಿದ್ದು ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಪ್ರಾಣಾಪಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.

ಶ್ರೀಗಳಿಗೆ ಸಹ ಯಾವುದೇ ತೊಂದರೆಯಾಗದೆ ಪ್ರಾಣಾಪಾಯದಿಂದ ಪಾರಾಗಿದ್ದು ಬೇರೆ ವಾಹನದ ಮೂಲಕ ಶಿರಸಿಗೆ ಪ್ರಯಾಣ ಬೆಳೆಸಿದರು ಎಂದು ತಿಳಿದು ಬಂದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.