Rain Alert | ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಮುಂಗಾರು ಪೂರ್ವ ಮಳೆ ಸಾಧ್ಯತೆ

Written by malnadtimes.com

Published on:

Karnataka Rain | ರಾಜ್ಯದ ಹಲವೆಡೆ ಮಾ.11ರ ಮಂಗಳವಾರದಿಂದ ಮೂರು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಕಡೆ ಗುಡುಗ ಸಹಿತ ಮಳೆಯಾಗುವ ಸಂಭವ ಇದೆ ಎನ್ನಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ, ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ ಸೇರಿ ವಿವಿಧೆಡೆ ಮಂಗಳವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

Leave a Comment