ಕೊಪ್ಪ ; ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಸಂಭವಿಸಿದೆ.
ವಿಘ್ನೇಶ್ (18) ಆತ್ಮಹತ್ಯೆಗೆ ಶರಣಾದ ಯುವಕ. ನಾಲ್ಕು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹಾಗೂ ಮಾನಸಿಕ ನೋವು ಅನುಭವಿಸುತ್ತಿದ್ದ. ಈ ನೋವಿನಿಂದ ಮನನೊಂದು, ಅವನು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಘ್ನೇಶ್ ಕೊಪ್ಪದಲ್ಲಿರುವ ಐಟಿಐ ಸಂಸ್ಥೆಯಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ. ದೈಹಿಕ ಹಾಗೂ ಮಾನಸಿಕ ಪೀಡನೆ ಎದುರಿಸುತ್ತಿದ್ದ ಈ ಯುವಕ, ಯಾವಾಗಲೂ ಆಸ್ಪತ್ರೆಗೆ ಹೋಗಿ ಬರಬೇಕಾಗುತ್ತಿತ್ತು. ನಿರಂತರ ಚಿಕಿತ್ಸೆ ಮತ್ತು ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳ ನಡುವೆ ಆತ ಮಾನಸಿಕ ನೊಂದಿದ್ದ.
ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.