ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್ ಇಲಾಖೆಯ ಡಿವೈಎಸ್ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೊಲೀಸ್ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತ ಎಸ್.ಪಿ. ಮಂಜುನಾಥ ಚೌಧರಿ ನೇತೃತ್ವದಲ್ಲಿ ದಾಳಿ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.