ಚಿಕ್ಕಮಗಳೂರು ; ಕಾರು-ಟಿಪ್ಪರ್ ನಡುವೆ ಅಪಘಾತವಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಬುಧವಾರ ನಡೆದಿದೆ.
ಅಪಘಾತವಾದ ರಭಸಕ್ಕೆ ಕಾರಿನ ಚಕ್ರಗಳು ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಟಿಪ್ಪರ್ ಲಾರಿಯ ಆಕ್ಸೆಲ್ ತುಂಡಾಗಿ ಕಂದಕಕ್ಕೆ ಇಳಿದಿದೆ.

ಅಂತ್ಯಸಂಸ್ಕಾರ ಮುಗಿಸಿ ಬಾಳೆಹೊನ್ನೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಹಾಗೂ ಚಿಕ್ಕಮಗಳೂರಿನಿಂದ ಬಾಳೆಹೊನ್ನೂರಿಗೆ ಹೋಗುತ್ತಿದ್ದ ಟಿಪ್ಪರ್ ನಡುವೆ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.