ಹೊಸನಗರ ; ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿ, ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ, ಕಾಂಗ್ರೆಸ್ ಮುಖಂಡ ಲೇಖನಮೂರ್ತಿ ಸಾವಂತೂರು ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಕಳೆದ ಹತ್ತು ವರ್ಷಕ್ಕೂ ಹೆಚ್ಚು ಕಾಲ ಹೊಸನಗರ ತಾಲೂಕು ಆರ್ಯ ಈಡಿಗ ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ತಾಲೂಕಿನ ಮುಂಬಾರು ಗ್ರಾಮದ ಸಾವಂತೂರಿನವರಾದ ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತಿಮ ಸಂಸ್ಕಾರ ಇಂದು ಅವರ ಸ್ವಗ್ರಾಮ ಸಾವಂತೂರಿನಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಂತಾಪ ;
ಲೇಖನಮೂರ್ತಿ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.