ಶಿವಮೊಗ್ಗ ; ಇಲ್ಲಿನ ಡಿಸಿ ಕಚೇರಿಯ ಎದುರಿನ ಸಾರ್ವಜನಿಕ ಖಾಲಿ ಜಾಗದಲ್ಲಿ ವಾಹನಗಳು ಮತ್ತು ಸಾರ್ವಜನಿಕರು ಓಡಾಡದಂತೆ ಬೇಲಿ ಹಾಕಿರುವುದು ಹಿಂದೂ ಸಂಘಟನೆ ಮತ್ತು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1AGqjGzANr/
ಖಾಲಿ ಜಾಗಕ್ಕೆ ಬೇಲಿ ಹಾಕಿರುವುದು ಹಿಂದೂ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿದೆ. ಇದು ಸಾರ್ವಜನಿಕರ ಆಸ್ತಿ ವಿನಃ ಬೇರೆಯಾರದ್ದೂ ಆಸ್ತಿಯಲ್ಲ. ಈ ಬೇಲಿಯನ್ನ ಪೊಲೀಸರು ಕೂಡಲೇ ತೆಗೆಸಬೇಕು, ಇಲ್ಲವಾದಲ್ಲಿ ನಾವೇ ಬೇಲಿ ತೆಗೆಯುವುದಾಗಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಗುವಿನ ವಾತಾವರಣ ನಿರ್ಮಾಣ ಆಗುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಆಗಮಿಸಿದರು. ಕೆಲವರು ಸಾರ್ವಜನಿಕ ಆಸ್ತಿಯನ್ನ ಕಬಳಿಸುತ್ತಿದ್ದಾರೆ. ಮುಸ್ಲೀಂರಿಗೆ ಸಹಕರಿಸುತ್ತಿರುವ ಎಲ್ಲಾ ಅಧಿಕಾರಿಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇನ್ನು ಎಸ್ಪಿ ಹಿಂದೂ ಸಂಘಟನೆಯ ಮುಖಂಡರ ಜೊತೆ ಮಾತುಕತೆ ನಡೆಸಿದರು.

ಸಂಜೆ 6-7 ಗಂಟೆಯವರೆಗೆ ಸಮಯ ಕೊಡಿ 7-15 ರ ವರೆಗೆ ತೆಗೆಸದಿದ್ದರೆ ನಾನೇ ತೆಗೆಸುವುದಾಗಿ ಭರವಸೆ ನೀಡಿದರು. ಎಸ್ಪಿ ಅವರ ಭರವಸೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆ ಪ್ರತಿಭಟನೆ ಹಿಂಪಡೆದಿದೆ. ಸದ್ಯ ವಾತಾವರಣ ತಿಳಿಗೊಂಡಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.