ತರೀಕೆರೆ ; ವಿದ್ಯುತ್ ತಂತಿ ತಗುಲಿ ಬೃಹತ್ ಕಾಡಾನೆಯೊಂದು ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ.
ತಣಿಗೇಬೈಲು ಅರಣ್ಯ ವ್ಯಾಪ್ತಿಯ ಲಾಲ್ ಬಾಗ್ ರಸ್ತೆಯಲ್ಲಿ ಹಲಸಿನಕಾಯಿ ತಿನ್ನಲು ಹೋಗಿ ಅಂದಾಜು 35 ವರ್ಷದ ಬೃಹತ್ ಕಾಡಾನೆ ವಿದ್ಯುತ್ ಶಾಕ್ ಗೆ ಬಲಿಯಾಗಿದೆ.
ಕಾಫಿನಾಡಲ್ಲಿ ಆಗಾಗ್ಗೆ ಕಾಡಾನೆ ದಾಳಿಗೆ ಜನರು ಸಾವನ್ನಪ್ಪುತ್ತಿದ್ದರೆ, ಇನ್ನೊಂದೆಡೆ ಬಂಡೆ ಮಧ್ಯೆ ಸಿಲುಕಿ, ಆಹಾರವಿಲ್ಲದೆ, ವಿದ್ಯುತ್ ಶಾಕ್ ನಿಂದ ಕಾಡಾನೆಗಳು ಸಾಯುತ್ತಿವೆ. ಯುಗಾದಿಯಂದೇ ಆನೆ ದಾಳಿಗೆ ರೈತ ಸಾವನ್ನಪ್ಪಿದ್ದ ಘಟನೆಯೂ ನಡೆದಿತ್ತು.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.