ಅಕ್ರಮ ಗಾಂಜಾ ಮಾರಾಟ ; ಆರೋಪಿ ಬಂಧನ
ಕಡೂರು: ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.
ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಕಡೂರು ಠಾಣೆ ಪಿಎಸ್ಐ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿ, 180 ಗ್ರಾಂ ಗಾಂಜಾ ವಶಪಡಿಸಿ ಕೊಂಡು ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.