ಹೊಸನಗರ : ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಅರಣ್ಯ ಜಮೀನು ಡಿ ರಿಸರ್ವ್ ಮಾಡುವ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ ಕಂದಾಯ, ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ನಿಮ್ಮ ಗ್ರಾಮಕ್ಕೆ ಬರಲಿದ್ದು ಅವರಿಗೆ ಅಗತ್ಯ ದಾಖಲೆಗಳನ್ನು ಒದಾಗಿಸುವಂತೆ ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್ ಆಯಾಯ ಗ್ರಾಮದ ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ಥರ ಪುನರ್ವಸತಿಗೆಂದು ಅರಣ್ಯ ಜಮೀನು ಬಿಡುಗಡೆಗಾಗಿ ಕೇಂದ್ರ ಸರ್ಕಾರ ಹಾಗೂ ಸುಪ್ರಿಂಕೋರ್ಟ್ ಜಿಲ್ಲೆಯಲ್ಲಿ ಜಂಟಿ ತನಿಖೆ ಮತ್ತು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಿರುವುದರಿಂದ ಈ ವೇಳೆ ಪ್ರಸ್ತಾವನೆಯಲ್ಲಿನ ದಾಖಲೆ ಸ್ಕೆಚ್ ಜಿ.ಪಿ.ಎಸ್ ದತ್ತಾಂಶಗಳನ್ನು ಆಧರಿಸಿ ಪ್ರಸ್ತಾಪಿತ ಬೊಲಾಕ್ ಹಾಗೂ ಸ.ನಂ.ನಲ್ಲಿರುವ ಬ್ಲಾಕ್ ಗಡಿ ಹಾಗೂ ವಿಸ್ತೀರ್ಣವನ್ನು ಭೂಮಾಪಕರು ನೊಂದಣಿ ಮಾಡಿ ದತ್ತಾಂಶ ಸಂಗ್ರಹಿಸಲಿದ್ದಾರೆ. ಭೂ ಅನುಭೋಗದಾರ ಸ್ಥಳದಲ್ಲಿದ್ದು ತಮ್ಮ ಜಮೀನಿನ ವಿಸ್ತೀರ್ಣವನ್ನು ನೊಂದಣಿ ಮಾಡಿಕೊಂಡು ಡಿಜಿಪಿಎಸ್ ದತ್ತಾಂಶ ಹಾಗೂ ವಿಸೀರ್ಣದ ವಿವರಗಳನ್ನು ಸಂಗ್ರಹಿಸಿಕೊಂಡು ನಿಯಮಾನುಸಾರ ಕ್ರಮ ವಹಿಸಲಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ನಿಮ್ಮ ಗ್ರಾಮಕ್ಕೆ ಬರುವಾಗ ತಿಳಿಸಲಾಗುವುದು ನೀವು ನಮ್ಮ ಭೂದಾಖಲೆಗಳನ್ನು ಇಟ್ಟುಕೊಂಡು ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೇಳಿಕೊಂಡರು.
ಈ ಸಂದರ್ಭದಲ್ಲಿ ಶಿರಸ್ತೇದಾರ್ ಮಂಜುನಾಥ್ ಕಟ್ಟೆ, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರೆವಿನ್ಯು ಇನ್ಸ್ಪೇಕ್ಟರ್ ಆಂಜನೇಯ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.