ರಿಪ್ಪನ್‌ಪೇಟೆ ; ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 73 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ.
ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಕುಳಿತ್ತಿದ್ದು 180 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 73 ರಷ್ಟು ಫಲಿತಾಂಶ ಬಂದಿದೆ ಎಂದರು.
ಕಲಾ ವಿಭಾಗದಲ್ಲಿ ಶೇ. 77.33 ರಷ್ಟು ಮತ್ತು ವಿಜ್ಞಾನ ವಿಭಾಗದಲ್ಲಿ ಶೇ. 67.50 ರಷ್ಟು ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ. 73.40 ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ಕಲಾ ವಿಭಾಗದಲ್ಲಿ 3 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 7 ವಿದ್ಯಾರ್ಥಿ ಹಾಗೂ ವಾಣಿಜ್ಯ ವಿಭಾಗದಲ್ಲಿ 8 ವಿದ್ಯಾರ್ಥಿಗಳು ಆತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಕಾಲೇಜ್‌ನ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಹೆಚ್ಚಿಸಿದ್ದಾರೆಂದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಸಿಡಿಸಿ ಉಪಾಧ್ಯಕ್ಷ ಜಿ.ಆರ್.ಗೋಪಾಲಕೃಷ್ಣ ಮತ್ತು ಸಿಡಿಸಿ ಸಮಿತಿಯವರು, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.