ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.57 ಫಲಿತಾಂಶ

Written by malnadtimes.com

Published on:

ಹೊಸನಗರ ; ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ 78.57% ಫಲಿತಾಂಶ ಬಂದಿದೆ ಎಂದು ಈ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್‌ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
ಕಲಾ ವಿಭಾಗದಲ್ಲಿ 569 ಅಂಕ ಪಡೆದ ನೇತ್ರಾವತಿ

ಕಲಾ ವಿಬಾಗದಲ್ಲಿ ಒಟ್ಟು 105 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 87 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 82.86% ಬಂದಿರುತ್ತದೆ. ವಾಣಿಜ್ಯ ವಿಭಾಗದಲ್ಲಿ 138 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 110 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ 79.71% ಬಂದಿರುತ್ತದೆ.  ವಿಜ್ಞಾನ ವಿಭಾಗದಲ್ಲಿ 51 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 34 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 78.57% ಉತ್ತೀರ್ಣರಾಗಿದ್ದು ಒಟ್ಟಾರೆಯಾಗಿ ಒಟ್ಟು 294 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 231 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 571 ಅಂಕ ಪಡೆದ ಸ್ವಾತಿ ಎಂ

ಒಟ್ಟು 37 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು 138 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 48 ವಿದ್ಯಾರ್ಥಿಗಳು ದ್ವಿತೀಯ ಹಾಗೂ 8 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 558 ಅಂಕ ಪಡೆದ ತೇಜಸ್ವಿನಿ ಜಿ ಯಾದವ್

ಅಭಿನಂದನೆ :

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್, ಕಾಲೇಜ್ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ.ಪಿ. ಸುರೇಶ್‌ ವಿದ್ಯಾರ್ಥಿಗಳನ್ನು ಅಭಿನಂದಿಸುವುದರ ಜೊತೆಗೆ ಈ ಕಾಲೇಜಿನ ಉತ್ತಮ ಪರಿಶ್ರಮಕ್ಕಾಗಿ ದುಡಿದ ಎಲ್ಲ ಉಪನ್ಯಾಸಕರ ವೃಂದ ಹಾಗೂ ಶಾಲಾಭಿವೃದ್ಧಿಯವರಿಗೆ ಅಭಿನಂದಿಸಿದ್ದಾರೆ.

Leave a Comment