ಏ. 20ಕ್ಕೆ ಬ್ರಹ್ಮೇಶ್ವರ ವೀರಭದ್ರ ದೇವಾಲಯ ಜೀರ್ಣೋದ್ದಾರ ಕಾರ್ಯಕ್ಕೆ ಅಡಿಗಲ್ಲು

Written by malnadtimes.com

Published on:

ಹೊಸನಗರ ; ಇತಿಹಾಸ ಪ್ರಸಿದ್ದ ಪುರಾತನ ದೇವಾಲಯಗಳಲ್ಲಿ ಒಂದಾದ ತಾಲೂಕಿನ ಪುಣಜೆ ಗ್ರಾಮದ ಬಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಾಲಯದ ಜೀರ್ಣೋದ್ದಾರ ಕಾರ್ಯಕ್ಕೆ ಸಂಸದ ಬಿ.ವೈ. ರಾಘವೇಂದ್ರ ಇದೇ 20ರ ಭಾನುವಾರ ಬೆಳಗ್ಗೆ 10-30ಕ್ಕೆ ಅಡಿಗಲ್ಲು ಹಾಕುವ ಮೂಲಕ ನೂತನ ಶಿಲಾಮಯ ದೇವಸ್ಥಾನ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ ಎಂದು ದೇವಾಲಯ ನಿರ್ಮಾಣ ಸಮಿತಿ ಸಂಚಾಲಕ ಹೀಲಗೋಡು ಯತೀಶ್ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಶುಕ್ರವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತೀರ್ಥಹಳ್ಳಿ ತಾಲೂಕು ಕೋಣಂದೂರು ಮಳಲಿಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಲಿದ್ದು, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಮ್ಮುಖದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಲಿವೆ.

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಡಿ.ಎಸ್. ಅರುಣ್, ಸಿದ್ದಾಪು ಅಲಳ್ಳಿಮಠದ ಆಗಮಶಾಸ್ತ್ರ ಪಂಡಿತ್ ವೇ. ಶ್ರೀ ಪುಟ್ಟಯ್ಯ ಶಾಸ್ತ್ರಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ.ಎನ್. ಸುಧೀರ್ ವಹಿಸಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಅವರು ಕೋರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಬಗೋಡು ಹಾಲಪ್ಪಗೌಡ, ಚಿಕ್ಕಮಣತಿ ಬಿ.ಯುವರಾಜ್, ಜಯಮ್ಮ ದೇವರಾಜ್, ಮಹೇಂದ್ರ ಮಂಡ್ರಿ, ಶಿವಾನಂದ ಮಾವಿನಕಟ್ಟೆ ಮೊದಲಾದವರು ಇದ್ದರು.

Leave a Comment