ಹೊಸನಗರ ; ಏ. 19ರ ಶನಿವಾರ ಸಂಜೆ 4 ಗಂಟೆಗೆ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ರಾಮನವಮಿ ಉತ್ಸವ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸ್ಥಳೀಯ ಸಂಚಾಲಕ ರಮಿತ್ ಪೂಜಾರಿ ತಿಳಿಸಿದ್ದಾರೆ.
ಸಂಜೆ 8 ಗಂಟೆಗೆ ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಶಿವಮೊಗ್ಗ ಪ್ರತ್ಯಂಗಿರ ದೇವಾಲಯದ ಶ್ರೀ ಸುಪ್ರಿತ್ ಗುರೂಜಿ ಹಾಗೂ ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ರಾಮಪ್ಪ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶ್ರೀ ರಾಮಸೇನೆ ರಾಜಾಧ್ಯಕ್ಷ ಗಂಗಾಧರ ಕುಲಕರ್ಣಿ ಮತ್ತು ಹಿಂದೂ ಮುಖಂಡ ರಘು ಸಕಲೇಶಪುರ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದು, ಆರ್‌ಎಸ್‌ಎಸ್‌ನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಸತೀಶ್ ದಾವಣಗೆರೆ ಹಾಗೂ ಜಿಲ್ಲಾ ವಿಶ್ವಹಿಂದೂ ಪರಿಷತ್ ಅಧ್ಯಕ್ಷೆ ಪ್ರತಿಮಾ ಸತೀಶ್ ಜೋಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಕೋರಿದ್ದಾರೆ.