ರಿಪ್ಪನ್‌ಪೇಟೆ ; ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತರುವ ಮೂಲಕ ಅವರನ್ನು ಕ್ರಿಯಾಶೀಲರನ್ನಾಗಿಸುವ ಉದ್ದೇಶದಿಂದಾಗಿ ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರಕೃತಿ ಪರಿಸರದ ಮಾವಿನಹೊಳೆ ನದಿ ತಟದಲ್ಲಿನ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.
ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮಠದಲ್ಲಿ 10 ದಿನಗಳ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿ, ಮಕ್ಕಳಲ್ಲಿ ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಸುಸಂಸ್ಕೃತರನ್ನಾಗಿಸಲು ಶಿಬಿರಗಳು ಸಹಕಾರಿಯಾಗಿದೆ. ಆರೋಗ್ಯ ಪೂರ್ಣ ಸದೃಢ ಸಮಾಜಕ್ಕಾಗಿ ಮತ್ತು ನಾವು ನೀವು ಎನ್ನು ಧ್ಯೇಯ ವಾಕ್ಯದೊಂದಿಗೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಧರ್ಮ ಧಾರ್ಮಿಕ ಆಚರಣೆಗಳ ಕುರಿತು ಮಾಹಿತಿ ನೀಡಿ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರದರ್ಶನ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಾಂಸ್ಕೃತಿಕ ಕಲೆಗಳಾದ ನೃತ್ಯ, ಸಂಗೀತ, ಚಿತ್ರಕಲೆ, ಹಾಸ್ಯಕಲೆ ಇನ್ನಿತರ ಜನಪದ ಕಲೆಗಳ ಕಲಾ ಪ್ರದರ್ಶನದೊಂದಿಗೆ ಮಕ್ಕಳಲ್ಲಿ ಜಾಗೃತಗೊಳಿಸುವ ಶಿಬಿರವನ್ನು ಮಠದ ಸಹಯೋಗದಲ್ಲಿ ನಡೆಸಲಾಗುತ್ತಿದೆ ಎಂದರು.
ಈ ಶಿಬಿರದಲ್ಲಿ ಸಾರಾ ಸಂಸ್ಥೆಯವರು ಮತ್ತು ಸುತ್ತಮುತ್ತಲಿನ ಶಾಲೆಗಳ ವಿದ್ಯಾರ್ಥಿ ಸಮೂಹ ಭಾಗವಹಿಸಿದ್ದಾರೆಂದರು.