ಸಾಗರ ; ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೈರಾಪುರ ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಮೃತರನ್ನು ಫರ್ಹನ್ನಿಸಾ (34), ಅಬ್ದುಲ್ ರಝೂ(23) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸೈಯದ್ ಸಲೀಂ, ಝೋಯಾ ಶೇಕ್, ಬುಶ್ರಾ ಫಾತಿಮಾ ಶೇಕ್ ಮತ್ತು ಬೀಬಿ ಆಯಿಶ ಹಾಗೂ ಟಿಪ್ಪರ್ ಚಾಲಕ ಅನಿಲ್ ಎಂಬುವರು ಗಾಯಗೊಂಡಿದ್ದಾರೆ. ಗಾಯಾಗಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಗೋವಾದಿಂದ ಶಿಕಾರಿಪುರದ ಹಿತ್ತಲ ಗ್ರಾಮಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಶಿಕಾರಿಪುರದಿಂದ ಆನಂದಪುರ ಕಡೆ ಬರುತ್ತಿದ್ದ ಜಲ್ಲಿ ತುಂಬಿದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.