ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ

Written by malnadtimes.com

Published on:

ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಹೆಚ್ಚುವರಿ ಲ್ಯಾಬ್ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು.

WhatsApp Group Join Now
Telegram Group Join Now
Instagram Group Join Now

60 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಲ್ಯಾಬ್ ಕಟ್ಟಡದ ಕಾಮಗಾರಿ  ಪೂರ್ಣಗೊಂಡ ಬಳಿಕ ಸಾರ್ವಜನಿಕರ ಉಪಯೋಗಕ್ಕೆ ಶೀರ್ಘವಾಗಿ ಲೋಕಾರ್ಪಣೆಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ, ತಾಲೂಕು ಆರೋಗ್ಯಾಧಿಕಾರಿ ಡಾ. ಗುರುಮೂರ್ತಿ, ಆರೋಗ್ಯ ಸಮಿತಿ ಸದಸ್ಯರಾದ ಗೋಪಿನಾಥ್, ಸಿಂಥಿಯಾ ಶೆರಾವೋ, ವಿನಯ್ ಕುಮಾರ್ ದುಮ್ಮ,  ಪಟ್ಟಣ ಪಂಚಾಯತ ಸದಸ್ಯರಾದ ಕೃಷ್ಣವೇಣಿ, ಗುರುರಾಜ್, ಗುಲಾಬಿ ಮೊದಲಾದವರು ಇದ್ದರು.


ಯಡಚಿಟ್ಟೆ ಎಸ್.ಸಿ ಕಾಲೋನಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಡಚಿಟ್ಟೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ – ದ್ಯಾವರ್ಸ ಸಂಪರ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ತಹಸೀಲ್ದಾರ್ ರಶ್ಮಿ, ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಮಾಜಿ ಅಧ್ಯಕ್ಷ ಶುಭಾಕರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ, ಕಳೂರು ಸೊಸೈಟಿ ಅಧ್ಯಕ್ಷ ವಿನಯ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Comment