ಹೊಸನಗರ ; ತಾಲೂಕಿನ ಯಡೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಬಿ.ಜಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 621 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ‌್ಯಾಂಕ್ ಪಡೆದಿದ್ದು, ಇಂದು ಅವರ ನಿವಾಸಕ್ಕೆ ಮಾಜಿ ಗೃಹಮಂತ್ರಿ, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಅಭಿನಂದಿಸಿದರು.
ಬಡತನ ಮತ್ತು ಗ್ರಾಮೀಣ ಪ್ರದೇಶದ ಅನಾನುಕೂಲತೆಯ ನಡುವೆಯೂ ನಿಧಿ ಸಾಧನೆ ಶ್ಲಾಘನೀಯ ಹಾಗೂ ಇತರೆ ಮಕ್ಕಳಿಗೆ ಸ್ಫೂರ್ತಿದಾಯಕವಾಗಿದೆ ಎಂದರು.
ಈ ವೇಳೆ ಬಿಜೆಪಿ ಮುಖಂಡ ಹಾಲಗದ್ದೆ ಉಮೇಶ್, ಬಂಕ್ರಿಬೀಡು ಮಂಜುನಾಥ್, ರಾಜೇಶ್ ಹಿರೇಮನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.