ಶಿವಮೊಗ್ಗ : ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತಾ (29), ಅಂಜಲಿ (26), ಸಂದೀಪ (26), ವಿಠಲ (55) ಮತ್ತು ಶಶಿಕಲಾ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಹೋಟೆಲ್ ವ್ಯಾಪಾರಕ್ಕೆಂದು ಸಾಗರದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.
ಎಸ್ಪಿ ಗೋಪಾಲ ಬ್ಯಾಕೋಡ, ಇನ್‌ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೆಎಂಸಿ-ಆರ್‌ಐ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ.

ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐದು ಮಂದಿ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.