ಹೊಸನಗರ ; ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಪಟ್ಟಣದ ಮಲೆನಾಡು ಪ್ರೌಢಶಾಲೆಯ ಒಟ್ಟು 85 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ. 91.76 ದಾಖಲಿಸಿದ್ದಾರೆ.
33 ಬಾಲಕರಲ್ಲಿ 28 ಹಾಗೂ 52 ಬಾಲಕಿಯಲ್ಲಿ 50 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. 4 ಬಾಲಕರು ಹಾಗೂ 10 ಬಾಲಕಿಯರು ಅತ್ಯುನ್ನತ ಶ್ರೇಣಿಯಲ್ಲಿ, 23 ಬಾಲಕರು ಹಾಗು 32 ಬಾಲಕಿಯರು ಪ್ರಥಮ ದರ್ಜೆಯಲ್ಲಿ ಹಾಗೂ ಓರ್ವ ಬಾಲಕ ಹಾಗು 08 ಬಾಲಕಿಯರು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಈ ಶಾಲೆಯ ಬಾಲಕರ ವಿಭಾಗದಲ್ಲಿ ಹೆಚ್ಚು ಅಂಕವನ್ನು ಹೆಚ್.ಸಿ. ನಿಖಿಲ್ (595/625) ಪಡೆದರೆ, ಬಾಲಕಿಯರಲ್ಲಿ ಅಂಕಿತಾ (583/625) ಅಂಕ ಗಳಿಸಿ ಕೀರ್ತಿ ಮೆರೆದಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.