ಭದ್ರಾವತಿ ; ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೇಮಣ್ಣ (68) ಕೊಲೆಯಾದ ವ್ಯಕ್ತಿ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ ಪದವಿ ಕಾಲೇಜ್ ರಸ್ತೆಯಲ್ಲಿ ಹೇಮಣ್ಣ ಅವರನ್ನು ಕೊಲೆ ಮಾಡಲಾಗಿದೆ. ಈ ಹಿಂದೆಯೂ ಹೇಮಣ್ಣ ಅವರ ಮೇಲೆ ದಾಳಿ ನಡೆಸಲಾಗಿತ್ತು ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

ಇಂದು ಬೆಳಗ್ಗೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.