ಕಡೂರು ; ಟ್ರ್ಯಾಕ್ಟರ್ ಮತ್ತು ಒಮ್ನಿ ನಡುವೆ ಡಿಕ್ಕಿ ಸಂಭವಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಆಂಜನೇಯ ದೇವಾಲಯ ಬಳಿ ಸಂಭವಿಸಿದೆ.
ಒಂದೂವರೆ ವರ್ಷದ ಮಗು ಮತ್ತು ದಾಕ್ಷಾಯಿಣಿ (50) ಮೃತಪಟ್ಟವರು ಎಂದು ಹೇಳಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಒಮ್ನಿ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.