ಹೊಸನಗರ ; ಮಾರುತಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಇಂದ್ರೇಶ್ ಅವಿರೋಧ ಆಯ್ಕೆಯಾದರು.
ತೆರವಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಇಂದ್ರೇಶ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕೃಷಿ ಅಧಿಕಾರಿ ಮಾರುತಿ ಕಾರ್ಯನಿರ್ವಹಿಸಿದರು.
ಈ ವೇಳೆ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಹೆಮ್ಮರವಾಗಿ ಬೆಳೆಯುತ್ತಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಬಡವರ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ 137 ಸ್ಥಾನಗಳನ್ನು ಪಡೆದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಯು ಪ್ರತಿಯೊಬ್ಬರಿಗೂ ಅನುಕೂಲಕರವಾಗಿದೆ ನಮ್ಮ ತಾಲ್ಲೂಕಿನಲ್ಲಿ ಪ್ರತಿಯೊಬ್ಬರು ಗ್ಯಾರಂಟಿ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಪ್ರತಿಯೊಂದು ಕುಟುಂಬಗಳಿಗೂ ಇದರ ಪ್ರಯೋಜನ ಪಡೆಯಲು ನಮ್ಮ ಕಾರ್ಯಕರ್ತರ ಶ್ರಮ ಅಮೂಲ್ಯವಾಗಿದೆ ಇದರಿಂದ ನಮ್ಮ ಕಾರ್ಯಕರ್ತರು ಮಿಚ್ಚಿನಂತೆ ಸೇವೆ ಸಲ್ಲಿಸುತ್ತಿದ್ದು ಮುಂದೆ ಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಜಯಶಾಲಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಚಿದಂಬರ, ಗ್ರಾ.ಪಂ. ಅಧ್ಯಕ್ಷೆ ಜಯಮ್ಮ, ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರು ಪಕ್ಷದ ಮುಖಂಡರು ಉಪಸ್ಥಿತರಿದ್ದರು.