ಕಡೂರು ; ಹಸುವಿನ ಕೆಚ್ಚಲು ಕತ್ತರಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ.

ಶೇಖರಪ್ಪ ಎಂಬ ರೈತನಿಗೆ ಸೇರಿದ 20 ಹಸುಗಳನ್ನು ತೋಟದ ಮನೆಯ ಕೋಳಿ ಶೆಡ್‌ನಲ್ಲಿ ಕೂಡಿಹಾಕಲಾಗಿತ್ತು. ರಾತ್ರಿ ವೇಳೆ ಗೋಕಳ್ಳರು ತಂತಿ ಬೇಲಿಯನ್ನು ಕತ್ತರಿಸಿ, ಹಸುಗಳನ್ನು ಸಾಗಿಸಲು ಯತ್ನಿಸಿದ್ದಾರೆ. ಆದರೆ, ಸಾಗಾಣಿಕೆ ಸಾಧ್ಯವಾಗದಿದ್ದಾಗ, ಕಳ್ಳರು ಒಂದು ಹಸುವನ್ನು ಕೊಂದು, ಅದರ ಕೆಚ್ಚಲು ಜಾಗವನ್ನು ಕೊಯ್ದುಕೊಂಡು ಪರಾರಿಯಾಗಿದ್ದಾರೆ. ಬಳಿಕ ಹಸು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ.
ಈ ಕೃತ್ಯವು ಯೋಜಿತವಾಗಿ ನಡೆದಿದ್ದು, ಸ್ಥಳೀಯರ ಸಹಕಾರವಿಲ್ಲದೆ ಇಂತಹ ಕೃತ್ಯ ಸಾಧ್ಯವಿಲ್ಲ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿ ಯಗಟಿ ಠಾಣೆಗೆ ದೂರು ನೀಡಿದ್ದಾರೆ.

ಬೀರೂರು ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀಕಾಂತ್, ಯಗಟಿ ಪಿಎಸ್‌ಐ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಮುಂದಾಗಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.