ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

Written by Mahesha Hindlemane

Published on:

ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ವಾಕಿಂಗ್ ಹೋಗುತ್ತಿದ್ದ ಅಡಿಕೆ ವ್ಯಾಪಾರಿ ಹೇಮಣ್ಣ (68) ಎಂಬ ವ್ಯಕ್ತಿಯನ್ನು ಚೂರಿಯಿಂದ ಇರಿದು ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ತಂಜಿಮ್ ಎಂಬ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದಲ್ಲಿ ಭಾಗಿಯಾಗಿದ್ದ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ಮಂಜುನಾಥ್ ಯಾನೆ ಚಳಿ ಮಂಜ ಎಂಬ ಆರೋಪಿಯ ಇರುವಿಕೆಯನ್ನು ತಿಳಿದುಕೊಂಡ ಪೊಲೀಸರು ಆತನನ್ನು ಬಂಧಿಸಲು ಯತ್ನಿಸಿದ್ದಾರೆ. ಆಗ ಆತ ಪೊಲೀಸ್ ಸಿಬ್ಬಂದಿ ಹರೀಶ್ ಎಂಬುವವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿ ಸೆರೆಹಿಡಿದು ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Comment