Ripponpete ಶಿವಮೊಗ್ಗ

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್.ಪಿ. ದಿಢೀರ್ ವರ್ಗಾವಣೆ !

ರಿಪ್ಪನ್‌ಪೇಟೆ ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್.ಪಿ. ಇವರನ್ನು ವರ್ಗಾವಣೆಗೊಳಿಸಿ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನ ಪಿಎಸ್‌ಐ ಆಗಿ ಸಾಗರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ-2 ಆಗಿ ಕಾರ್ಯ ನಿರ್ವಹಿಸುತ್ತಿದ್ದ ಟಿ.ಎಂ.ನಾಗರಾಜ್ ಇವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

Leave a Comment