ಹೊಸನಗರ

ಮೈಮೇಲೆ ಬಿಸಿ ಟೀ ಬಿದ್ದು ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಿಸದೆ ಸಾವು !

HOSANAGARA ; ಮೈಮೇಲೆ ಬಿಸಿ ಟೀ ಬಿದ್ದು ಗಾಯಗೊಂಡಿದ್ದ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಸಮೀಪದ ಹಿರಿಮನೆ ಎಂಬಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ್ ಹಿರಿಮನೆ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಅಶ್ವಿನಿ ಪಾಟೀಲ್ ಅವರ 2 ವರ್ಷದ ಪುತ್ರ ಅಥರ್ವ ಅ. 24ರಂದು ಗುರುವಾರ ಮೈಮೇಲೆ ಬಿಸಿ ಟೀ ಬೀಳಿಸಿಕೊಂಡು ಗಂಭೀರವಾಗಿ ಗಾಯಗೊಂಡಿದ್ದು, ಮಗುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ 8 ದಿನಗಳಿಂದ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಗು ಮೃತಪಟ್ಟಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ನಡೆದಿದ್ದೇನು ?

ರಾಜೇಶ್ ಅವರ ನೆರೆಮನೆಯ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಂದು ರಾತ್ರಿ ಅಂತಿಮ ದರ್ಶನಕ್ಕೆ ಬಂದಿದ್ದ ಜನರಿಗೆ ರಾಜೇಶ್ ಮತ್ತು ಅವರ ಪತ್ನಿ ಟೀ ಮಾಡಿ ಪಾತ್ರೆಗೆ ಹಾಕಿ ತಮ್ಮ ಮನೆಯ ಜಗಲಿ ಮೇಲೆ ಇಟ್ಟಿದ್ದಾರೆ. ಆಟವಾಡುತ್ತಾ ಅಲ್ಲಿಗೆ ಬಂದ ಅಥರ್ವ ಪಾತ್ರೆಯನ್ನು ಎಳೆದಿದ್ದಾನೆ ತುಂಬಾ ಬಿಸಿ ಇದ್ದ ಟೀ ಮೈಮೇಲೆ ಚೆಲ್ಲಿ ಗಾಯಗೊಂಡಿದ್ದ ಎನ್ನಲಾಗಿದೆ.

ರಾಜೇಶ್, ಅಶ್ವಿನಿ ದಂಪತಿಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿದ್ದು ಇದೀಗ ಪುತ್ರನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗುಲು ಮುಟ್ಟಿದ್ದು ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]