ಶಿವಮೊಗ್ಗ

ಶಿವಮೊಗ್ಗ ; ಮಗುನಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ !

ಶಿವಮೊಗ್ಗ ; 9ನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು ಅಲರ್ಟ್ ಆಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಏನಿದು ಘಟನೆ ?

9ನೇ ತರಗತಿ ಓದುತ್ತಿರುವ 14 ವರ್ಷದ ಬಾಲಕಿ ಹೊಟ್ಟೆ ನೋವೆಂದು ಶಾಲೆಗೆ ರಜೆ ಹಾಕಿದ್ದಳು. ಎರಡು ದಿನದ ಬಳಿಕ ಬಾಲಕಿ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಮಗುವನ್ನು ರಕ್ಷಿಸಿ ಚಿಕಿತ್ಸೆ ನೀಡಿದ್ದಾರೆ. ವೈದ್ಯರ ಪ್ರಕಾರ 7 ತಿಂಗಳಿಗೆ ಜನ್ಮ ನೀಡಿದ್ದು ಮಗು 1.8 ಕೆ.ಜಿ ತೂಕವಿದ್ದು ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ.

ಬಾಲಕಿ ಮಗುವಿಗೆ ಜನ್ಮ ನೀಡುತ್ತಲೇ ತಂದೆ, ತಾಯಿ ದಿಗ್ಭ್ರಾಂತರಾಗಿದ್ದಾರೆ. ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡಿದ್ದು ಇವರಿಗೆ ಓರ್ವ ಪುತ್ರ, ಮೂವರು ಹೆಣ್ಣು ಮಕ್ಕಳಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಘಟನೆ ಸಂಬಂಧ ಮಕ್ಕಳ ಕಲ್ಯಾಣ ಸಮಿತಿ ಪ್ರಮುಖರು ಬಾಲಕಿಯ ವಿಚಾರಣೆ ನಡೆಸಿದ್ದಾರೆ. ಯಾರು ಎನ್ನುವುದರ ಬಗ್ಗೆ ಬಾಲಕಿಯು ಸಮಿತಿ ಹಾಗೂ ಪೊಲೀಸರ ಮುಂದೆ ಗೊಂದಲದ ಹೇಳಿಕೆ ನೀಡುತ್ತಿದ್ದಾಳೆ.

ಬಾಲಕಿಯ ಕೌನ್ಸೆಲಿಂಗ್ ನಡೆಸಿದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧಾರ ಮಾಡಲಾಗಿದೆ. ಬಾಲಕಿ ಹಾಗೂ ಮಗು ಮೇಲೆ ಮಕ್ಕಳ ಕಲ್ಯಾಣ ಸಮಿತಿ ತೀವ್ರ ನಿಗಾ ಇಟ್ಟಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]