Accident

ಆಟವಾಡುತ್ತಾ ರಸ್ತೆಗೆ ಬಂದ ಬಾಲಕ ; ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು !

ಆಟವಾಡುತ್ತಾ ರಸ್ತೆಗೆ ಬಂದ ಬಾಲಕ ; ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು ! – InShot 20260719 191248299

ತೀರ್ಥಹಳ್ಳಿ : ತಾಲೂಕಿನ ಗುಂಡುಗದ್ದೆ ಬಳಿ ಇಂದು ಹೃದಯಾವಿದ್ರಾವಕ ಘಟನೆಯೊಂದು ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಹೌದು, ತ್ರಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪತ್ರಕರ್ತ ಪ್ರಗತ್‌.ಕೆ.ಆರ್‌ ಮತ್ತು ರಂಜನಾ ದಂಪತಿಯ 6 ವರ್ಷದ ಪುತ್ರ ಋಷ್ಯ ಎಂಬಾತನು ಆಟವಾಡುತ್ತಾ ರಸ್ತೆಗೆ ಬಂದಾಗ ಕಾರು ಡಿಕ್ಕಿ ಹೊಡೆದಿದೆ‌.

ಮನೆಯ ಪಕ್ಕದಲ್ಲಿ ಲಾರಿ ನಿಂತಿದ್ದರಿಂದ ಮಗು ರಸ್ತೆಯಲ್ಲಿ ಇರುವುದು ಕಾರು ಚಾಲಕನಿಗೆ ಗೋಚರಿಸದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ. ತಕ್ಷಣವೇ ಸ್ಥಳದಲ್ಲಿದ್ದ ಪೋಷಕರು ಮಗುವನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]