HOSANAGARA ; ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್‌ವೊಂದು ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯ ಬಾಳೆಬರೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ರಾತ್ರಿ 8ರ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಸಾಗುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ದೇವಸ್ಥಾನದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ ವಾಹನ ಜಖಂಗೊಂಡಿದೆ. ಅಲ್ಲದೇ ಕಾಂಪೌಂಡ್ ಸಹ ಹಾನಿಯಾಗಿದೆ.
ಕ್ಯಾಂಟರ್ ಚಾಲಕ ಪದ್ದಿಲೇಟಿ ಬಿನ್ ನಾರಾಯಣಪ್ಪ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ನಿವಾಸಿಯಾಗಿದ್ದು, ಅವರ ಎಡಗಾಲು ಹಾಗೂ ಎಡ ಕೈಗೆ ಗಾಯವಾಗಿದೆ.

ಈ ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.