Crime News

ಇಸ್ಪೀಟ್ ಅಡ್ಡೆ ಮೇಲೆ ದಾಳಿ, 7 ಮಂದಿ ವಿರುದ್ಧ ಪ್ರಕರಣ ದಾಖಲು

HOSANAGARA ; ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲೂಕಿನ ಮಾರುತಿಪುರ ಸಮೀಪದ ನೀರೇರಿಯಲ್ಲಿ ಅಕೇಶಿಯಾ ಪ್ಲಾಂಟೇಶನ್‌ನಲ್ಲಿ ಕೆಲ ವ್ಯಕ್ತಿಗಳು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಂಕರಗೌಡ ಪಾಟೀಲ್ ಹಾಗು ಸಿಬ್ಬಂದಿಗಳು ದಾಳಿ ನಡೆಸಿ ಜೂಜಾಟಕ್ಕೆ ಬಳಸಿದ್ದ ಇಸ್ಪೀಟ್ ಎಲೆಗಳು ಹಾಗೂ 5130 ರೂ. ನಗದನ್ನು ವಶಪಡಿಸಿಕೊಂಡು 7 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>